ಸೆ.27 ರಿಂದ ಕೌಶಲ್ಯ- ಉದ್ಯೋಗ ಅಭಿವೃದ್ಧಿ ಶಿಬಿರ

Update: 2019-09-16 16:37 GMT

ಉಡುಪಿ, ಸೆ.16: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ನೋಪಾಯ ಇಲಾಖೆ ಬೆಂಗಳೂರು ಮತ್ತು ಸಿಡಾಕ್ ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಸ್ವಉದ್ಯೋಗಾಂಕ್ಷಿಗಳಿಗೆ ಉಚಿತ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರವನ್ನು ಸೆ.27 ಮತ್ತು 28ರಂದು ಉಡುಪಿಯಲ್ಲಿ ಏರ್ಪಡಿಸ ಲಾಗಿದೆ.

ಸರಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಸ್ವಉದ್ಯೋಗಾಂಕ್ಷಿ ಗಳಿಗೆ ಶಿಬಿರದಲ್ಲಿ ಭಾಗವಸಲು ಅವಕಾಶ ಇದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, ಸರಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ವಿವಿಧ ಯೋಜನೆಗಳು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ವಿವಿಧ ಕ್ಷೇತ್ರಗಳಲ್ಲಿರುವ ಅವಕಾಶಗಳು, ಜಿಎಸ್‌ಟಿ., ಯೋಜನಾ ವರದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ ಇತ್ಯಾದಿ ವಿಚಾರಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಮಗ್ರ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾತಿಗಾಗಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಕೈಗಾರಿಕಾ ವಸಾಹತು, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9483120937 / 8217530146 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News