ಅಧಿಕಾರಿಗಳು ಕೆಲಸದಲ್ಲಿ ಪ್ರಾಕ್ಟಿಕಲ್ ಆಗಿ ಇರಿ: ಶಾಸಕ ಜಿ.ಟಿ.ದೇವೇಗೌಡ

Update: 2019-09-16 17:00 GMT

ಮೈಸೂರು,ಸೆ.16: ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳು ಕೆಲಸದಲ್ಲಿ ಪ್ರಾಕ್ಟಿಕಲ್ ಆಗಿ ಇರಿ ಎಂದು ಗುಡುಗಿದರು.

ನಗರದ ಜಲದರ್ಶಿನಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ಮಹಾನಗರ ಪಾಲಿಕೆ ಮತ್ತು ಮುಡಾ ಅಧಿಕಾರಿಗಳ ಸಭೆ ನಡೆಸಿದ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳನ್ನು ಕೂಡಲೇ ಮಾಡುವಂತೆ ಸೂಚಿಸಿದರು.

ದಸರಾ ಸಮೀಪಿಸುತಿದ್ದು ಆದಷ್ಟು ಬೇಗ ರಿಂಗ್ ರಸ್ತೆಯ ಗುಂಡಿಗಳನ್ನು ಮುಚ್ಚಿ ಮತ್ತು ಲೈಟ್ ವ್ಯವಸ್ಥೆ ಸರಿಪಡಿಸಿ ಎಂದು ಸೂಚಿಸಿದರು. ರಿಂಗ್ ರಸ್ತೆಯ ಕಾಮಗಾರಿ ಬಗ್ಗೆ ದೂರವಾಣಿ ಮೂಲಕ ಮುಡಾ ಆಯುಕ್ತ ಕಾಂತರಾಜು ಬಳಿ ಮಾಹಿತಿ ಪಡೆದ ಶಾಸಕರು, ಕಸ, ಬೀದಿ ದೀಪ, ಸ್ವಚ್ಛತೆ ಕಡೆ ಹೆಚ್ಚು ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದಸರಾ ಹಿನ್ನೆಲಯಲ್ಲಿ ಅಭಿವೃದ್ದಿ ಕೆಲಸಗಳಿಗೆ ಸ್ಥಳೀಯ ಕಾರ್ಪೊರೇಟರ್ ಸ್ಥಳೀಯ ಸಂಘ ಸಂಸ್ಥೆಗಳನ್ನು ಬಳಸಿಕೊಳ್ಳುವಂತೆ ಹೇಳಿದರು. ಪಕ್ಷ ಭೇದ ಮರೆತು ಎಲ್ಲರ ಜೊತೆ ಸೇರಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಪೂರ್ಣಿಮ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News