ಪ್ರತಿಭೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸಾಧಕರಾಗಬೇಕು: ಶಾಸಕ ಮಠಂದೂರು

Update: 2019-09-17 13:03 GMT

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ತನ್ನಲ್ಲಿರುವ ಪ್ರತಿಭೆಯನ್ನು ಬಳಸಿಕೊಂಡು ಸಾಧನೆಯನ್ನು ಮಾಡಬೇಕು, ಸ್ಟುಡೆಂಟ್ ಲೈಫ್ ಈಸ್ ಗೋಲ್ಡನ್ ಲೈಫ್ ಅದರಂತೆ ಗೋಲ್ಡನ್ ಲೈಫ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧಕರಾಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒಂದಷ್ಟು ವ್ಯತ್ಯಾಸಗಳಿರಬಹುದು ಆದರೆ ವಿದ್ಯಾರ್ಥಿಗಳ ಪ್ರತಿಭೆಗಳಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ, ಸರಕಾರಿ ಶಾಲೆಗಳು ಪ್ರತಿಯೊಂದು ವಿಭಾಗದಲ್ಲೂ ಒಳ್ಳೆಯ ಸಾಧನೆಯನ್ನು ಮಾಡುತ್ತಿರುವುದು ಶ್ಲಾಘನೀಯ ಎಂದ ಶಾಸಕರು, ದೇಶಪ್ರೇಮದೊಂದಿಗೆ ಕ್ರೀಡಾಪ್ರೇಮವನ್ನು ಬೆಳಸಿಕೊಂಡು ಉತ್ತಮ ಶಾರೀರಿಕ ಶಕ್ತಿಯನ್ನು ಪಡೆದುಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ವಿದ್ಯಾರ್ಥಿಗಳ ಶಾರೀರಿಕ ಬೆಳವಣಿಗೆಗೆ ಕ್ರೀಡೆ ಬಹಳ ಅಗತ್ಯ, ಕ್ರೀಡೆಗೆ ಸರಿಯಾದ ಪ್ರೋತ್ಸಾಹ ಶಾಲೆಗಳಿಂದ ಸಿಗಬೇಕು ಅದೇ ರೀತಿ ಕ್ರೀಡೆಯನ್ನು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರಕಾರ ಕೂಡ ಹೆಚ್ಚಿನ ಪ್ರೋತ್ಸಾಹ ಕೊಡಬೇಕು ಈ ನಿಟ್ಟಿನಲ್ಲಿ ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿದರು.

ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಮ ಏಣೆಕಲ್, ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ ಮತ್ತು ತೀರ್ಪುಗಾರ ಶಿವರಾಮ ಭಟ್ ಬೀರ್ನಕಜೆ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ಒಳಮೊಗ್ರು ಗ್ರಾಪಂ ಸದಸ್ಯ ಅಬ್ದುಲ್ ರಹೀಮಾನ್ ಅರಿಯಡ್ಕ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಿತೀಶ್ ಕುಮಾರ್ ಶಾಂತಿವನ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ದುಗ್ಗಪ್ಪ ಎನ್. ಸ್ವಾಗತಿಸಿದರು. ಪ್ರಭಾರ

ಉಪಪ್ರಾಂಶುಪಾಲೆ ಪೂರ್ಣಿಮಾ ಬಿ.ಶೆಟ್ಟಿ ವಂದಿಸಿದರು. ಉಪನ್ಯಾಸಕ ಸುಲೈಮಾನ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಜಯರಾಮ ಗೌಡ ಕಾರ್ಯಕ್ರಮ ನಿರೂಪಿಸಿದರು.

17ಪಿಟಿಆರ್- ವಾಲಿಬಾಲ್

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News