ಸೆ.28ರಂದು ಸಾಮಾಜಿಕ ಪಾಲುಗಾರಿಕೆ ಆಗ್ರಹಿಸಿ ಸರ್ವ ಜನರ ಸಂವಿಧಾನ ಸಮಾವೇಶ

Update: 2019-09-17 13:19 GMT

ಉಡುಪಿ, ಸೆ.17: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಸರ್ವ ಜನರ ಸಂವಿಧಾನ ಸಮಾವೇಶವನ್ನು ಸೆ.28ರಂದು ಉಡುಪಿ ಮಿಶನ್ ಕಂಪೌಂಡ್‌ನಲ್ಲಿರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸ ಲಾಗಿದೆ.

ಮೀಸಲಾತಿಯನ್ನು ಜಾರಿಗೊಳಿಸಿ ಇಂದಿಗೆ ನೂರು ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಈ ಸಮಾವೇಶದಲ್ಲಿ ಭೂಮಿಯ ಸಮಾನ ಹಂಚಿಕೆ, ವಸತಿಹೀನರಿಗೆ ಸೂರು, ಸರಕಾರಿ ಶಾಲೆಗಳ ಉನ್ನತೀಕರಣ, ಉದ್ಯೋಗಾವಕಾಶ, ಖಾಸಗಿ ಕ್ಷೇತ್ರಗಳಲ್ಲಿ ಮೀಸಲಾತಿ, ಮಹಿಳೆಯರಿಗೆ ಸಮಾನ ಹಕ್ಕುಗಳಿಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರವನ್ನು ಒತ್ತಾಯ ಮಾಡಲಾಗು ವುದು ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬೆಳಗ್ಗೆ 10.30ಕ್ಕೆ ನಡೆಯುವ ಸಮಾವೇಶದ ಬೃಹತ್ ಮೆರವಣಿಗೆಯು ಉಡುಪಿ ಬೋರ್ಡ್ ಹೈಸ್ಕೂಲ್‌ನಿಂದ ಮುಖ್ಯರಸ್ತೆಯಲ್ಲಿ ಸಾಗಿ ಸಭಾಂಗಣದಲ್ಲಿ ಸಮಾಪ್ತಿಗೊಳ್ಳಲಿದೆ. ಬಳಿಕ ನಡೆಯುವ ಸಮಾವೇಶವನ್ನು ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿರುವರು. ಮುಂಡರಗಿ ತೋಂಟ ದಾರ್ಯ ಶಾಖಾಮಠದ ಪೀಠಾಧ್ಯಕ್ಷ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿ ಮುಖ್ಯ ಭಾಷಣ ಮಾಡಲಿರುವರು.

ಮುಖ್ಯ ಅತಿಥಿಗಳಾಗಿ ಎಸ್‌ಸಿ ಎಸ್‌ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಹಾದೇವ ಸ್ವಾಮಿ, ಸಂವಿಧಾನ ಉಳಿವಿಗಾಗಿ ಕರ್ನಾಟಕ ಮುಖಂಡ ಕೆ.ಎಲ್. ಅಶೋಕ್, ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಉಡುಪಿ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಹಿರಿಯ ಚಿಂತಕ ಜಿ.ರಾಜಶೇಖರ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಉಪನಿರ್ದೇಶಕ ರಮೇಶ್, ಪೌರಾ ಯುಕ್ತ ಆನಂದ ಕಲ್ಲೋಳ್ಕರ್, ದಲಿತ ಮುಖಂಡ ರೋಹಿತಾಕ್ಷ ಕೆ., ಧರ್ಮ ಗುರು ಫಾ.ವಿಲಿಯಂ ಮಾರ್ಟಿಸ್, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಅವರನ್ನು ಸನ್ಮಾನಿಸಲಾಗುವುದು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಅಣ್ಣಪ್ಪ, ಶ್ಯಾಮ್ ಸುಂದರ್ ತೆಕ್ಕಟ್ಟೆ, ಪರಮೇಶ್ವರ ಉಪ್ಪೂರು, ಮಂಜುನಾಥ್, ಕಾಪು ತಾಲೂಕು ಪ್ರಧಾನ ಸಂಚಾಲಕ ಲೋಕೇಶ್ ಪಡುಬಿದ್ರಿ, ಮೂಡಬೆಟ್ಟು ಪ್ರಧಾನ ಸಂಚಾಲಕ ಶಿವಾನಂದ ಮೂಡಬೆಟ್ಟು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News