ವಿಟ್ಲ: ಅಕ್ರಮ ಮದ್ಯ ಮಾರಾಟ - ಆರೋಪಿ ಸೆರೆ

Update: 2019-09-17 13:57 GMT

ವಿಟ್ಲ, ಸೆ. 17: ಕೋಳಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟದ ಆರೋಪದ ಮೇರೆಗೆ ಮದ್ಯ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಅನಂತಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ.

ಅನಂತಾಡಿ ಗ್ರಾಮದ ಗೋಳಿಕಟ್ಟೆ ನಿವಾಸಿ ವಿಶ್ವನಾಥ (44) ಬಂಧಿತ ಆರೋಪಿ. ಈತ ಕೋಳಿ ಅಂಗಡಿ ನಡೆಸುತ್ತಿದ್ದು, ತನ್ನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಶೇಖರಣೆ ಮಾಡಿ ಗ್ರಹಕರಿಗೆ ಮಾರಾಟ ಮಾಡುತ್ತಿದ್ದ ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಎಸ್ಸೈ ಯಲ್ಲಪ್ಪ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ. ಆರೋಪಿಯಿಂದ ಸುಮಾರು 12 ಲೀ. ಮದ್ಯ ಹಾಗೂ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News