ಸರಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬೊಕ್ಕೆ ಬೇಡ: ದಿನಕರ ಬಾಬು
Update: 2019-09-17 19:57 IST
ಉಡುಪಿ, ಸೆ.17: ಜಿಲ್ಲೆಯಲ್ಲಿ ನಡೆಯುವ ವಿವಿಧ ಸರಕಾರಿ ಕಾರ್ಯಕ್ರಮ ಗಳಲ್ಲಿ ಅತಿಥಿ ಗಣ್ಯರನ್ನು ಸ್ವಾಗತಿಸುವಾಗ ಪ್ಲಾಸ್ಟಿಕ್‌ನಿಂದ ಸುತ್ತಿದ ಹೂವಿನ ಬೊಕ್ಕೆಗಳನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿರುವುದರಿಂದ ಸರಕಾರಿ ಕಾರ್ಯಕ್ರಮಗಳಲ್ಲಿ ಈ ರೀತಿ ಪ್ಲಾಸ್ಟಿಕ್ ಬಳಕೆ ಮಾಡುವುದು ಸಮಂಜಸವಾಗಿರುವುದಿಲ್ಲ ಎಂದು ಜಿಪಂಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.
ಆದುದರಿಂದ ಸರಕಾರಿ ಕಾರ್ಯಕ್ರಮಗಳಲ್ಲಿ ಅತಿಥಿ ಗಣ್ಯರನ್ನು ಸ್ವಾಗತಿಸುವ ಸಂದರ್ಭ ಪ್ಲಾಸ್ಟಿಕ್ ರಹಿತ ಬೊಕ್ಕೆಗಳನ್ನು ನೀಡುವ ಮೂಲಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಎಲ್ಲಾ ಇಲಾಖೆಗಳಿಗೆದಿನಕರ ಬಾಬು ಸೂಚನೆ ನೀಡಿದ್ದಾರೆ.