ಉಡುಪಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
Update: 2019-09-17 20:01 IST
ಉಡುಪಿ, ಸೆ.17: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಜಿ.ಜಗದೀಶ್ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುರುಳಿಧರ್, ಉಡುಪಿ ಶಾರದ ಕಲ್ಯಾಣ ಮಂಟಪ ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಸದಸ್ಯರು, ಉಡುಪಿ ನಗರ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಪೂರ್ಣಿಮ ವಂದಿಸಿದರು.