ಹಿಂದಿ ಹೇರಿಕೆ: ಕೇಂದ್ರ ಸರಕಾರದ ವಿರುದ್ಧ ಪತ್ರ ಚಳವಳಿ

Update: 2019-09-17 16:48 GMT

ಮಂಡ್ಯ, ಸೆ.17: ಕೇಂದ್ರ ಸರಕಾರದ ಹಿಂದಿ ಭಾಷೆ ಹೇರಿಕೆ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮದ್ದೂರಿನ ಅಂಚೆ ಕಚೇರಿ ಎದುರು ಮಂಗಳವಾರ ಪತ್ರ ಚಳವಳಿ ಮಾಡಿದರು.

ವೇದಿಕೆ ರಾಜ್ಯಾಧ್ಯಕ್ಷ ರಮೇಶ್‍ಗೌಡ ಮಾತನಾಡಿ, ಬ್ಯಾಂಕಿಂಗ್ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷೆಗಳನ್ನು ಕನ್ನಡ ಭಾಷೆಯ ಬದಲಿಗೆ ಹಿಂದಿಯಲ್ಲಿ ಬರೆಯಬೇಕು ಎಂಬ ಕೇಂದ್ರ ಸರಕಾರದ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರದಿಂದ ನಡೆಯುವ ಯಾವುದೇ ಪರೀಕ್ಷೆಯನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲಿ ಬರೆಯಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಶಂಕರ್, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಮುಖಂಡರಾದ ಮಹಾಲಿಂಗು, ಕೋಟಿಕೃಷ್ಣ, ರಾಜೇಂದ್ರ, ಪ್ರಸನ್ನ, ದೇವೇಗೌಡ ಇನ್ನಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News