×
Ad

ಭೀಷ್ಮ ಕೆರೆ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗೆ ಹೈಕೋರ್ಟ್ ತಡೆ

Update: 2019-09-17 22:25 IST

ಬೆಂಗಳೂರು, ಸೆ.17: ಗದಗ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಮೃತ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿ, ರಾಜ್ಯ ಸರಕಾರಕ್ಕೆ ಮೂರು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ.

ಈ ಕುರಿತು ನಜೀರಾ ಅಹ್ಮದ್ ಎಚ್. ಅಂಗಡಿ ಸೇರಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಲಕ್ಷ್ಮಣ್‌ಮೂರ್ತಿ ಅವರು, ಭೀಷ್ಮ ಕೆರೆ ಆವರಣದ ಮುಂಭಾಗದಲ್ಲಿ ಅಮೃತ ಸಿಟಿ ಯೋಜನೆ ಅಡಿ ಪಾರ್ಕಿಂಗ್ ವ್ಯವಸ್ಥೆ, ಓಪನ್ ಜಿಮ್, ಫುಡ್ ಪಾರ್ಕ್, ವಸ್ತ ಪ್ರದರ್ಶನ ಮಳಿಗೆ ಸೇರಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರಿಂದ, ಕೆರೆ ಒತ್ತುವರಿಯಾಗಲಿದೆ. ಹೀಗಾಗಿ, ಈ ಕಾಮಗಾರಿಗೆ ತಡೆ ನೀಡಬೇಕೆಂದು ಪೀಠಕ್ಕೆ ತಿಳಿಸಿದರು. ನ್ಯಾಯಪೀಠವು ಕಾಮಗಾರಿಗೆ ತಡೆ ನೀಡಿ, ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News