ಮೋದಿ ಭೇಟಿಗೆ ಮುನ್ನ ಮಮತಾ ಬ್ಯಾನರ್ಜಿ ಭೇಟಿಯಾಗಿದ್ದು ಯಾರನ್ನು ಗೊತ್ತೇ?

Update: 2019-09-18 03:52 GMT

ಕೊಲ್ಕತ್ತಾ, ಸೆ.18: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೊಸದಿಲ್ಲಿಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ವಿಮಾನ ಏರುವ ಮುನ್ನ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಪತ್ನಿಯನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನೆರೆಯ ಜಾರ್ಖಂಡ್‌ಗೆ ಎರಡು ದಿನಗಳ ಭೇಟಿ ನೀಡಿ ಧನಬಾದ್‌ನಿಂದ ವಾಪಸ್ಸಾಗುವ ವೇಳೆ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಜಶೋಧಾ ಬೆನ್ ಹಾಗೂ ಮಮತಾ ಬ್ಯಾನರ್ಜಿ ಪರಸ್ಪರ ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿಕೊಂಡರು.

"ಇದು ಆಕಸ್ಮಿಕ ಭೇಟಿ ಹಾಗೂ ಅವರು ಶುಭಾಶಯ ವಿನಿಮಯ ಮಾಡಿಕೊಂಡರು. ಮುಖ್ಯಮಂತ್ರಿ ಸೀರೆಯೊಂದನ್ನು ಜಶೋಧಾ ಬೆನ್‌ಗೆ ಉಡುಗೊರೆಯಾಗಿ ನೀಡಿದರು" ಎಂದು ಮೂಲಗಳು ಹೇಳಿವೆ.

ಮಮತಾ ಬ್ಯಾನರ್ಜಿ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಕೇಂದ್ರದಿಂದ ಬಿಡುಗಡೆಯಾಗಬೇಕಿರುವ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಜಶೋಧಾ ಬೆನ್ ಅವರು ಸೋಮವಾರ ಪಶ್ಚಿಮ ಬಂಗಾಳದ ಪಶ್ಚಿಮ್ ವರ್ಧಮಾನ್ ಜಿಲ್ಲೆಯ ಅಸನ್ಸೋಲ್‌ನಲ್ಲಿ ಕಲ್ಯಾಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News