ನೆರೆ ಪರಿಹಾರ; ಪ್ರಧಾನಿ ಬಳಿ ಸರ್ವಪಕ್ಷದ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ: ಯಡಿಯೂರಪ್ಪ

Update: 2019-09-18 05:12 GMT

ಬೆಂಗಳೂರು, ಸೆ.18: ರಾಜ್ಯ ಸರ್ಕಾರ ಪ್ರವಾಹ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ಮಾಡುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಒಟ್ಟಿಗೆ ಅನುದಾನ ಬಿಡುಗಡೆ ಮಾಡಲಿದೆ. ಪ್ರಧಾನಿಯವರ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡ ವರಿಗೆ ಮನೆ ನಿರ್ಮಿಸುವ ಕಾರ್ಯ ಆರಂಭವಾಗಿದೆ. ಕಾಂಗ್ರೆಸ್ ನಾಯಕರಿಗೆ ಬೇರೆ ಕಾರ್ಯಕ್ರಮವಿಲ್ಲದರಿಂದ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರವಾಹ ಪರಿಹಾರ ವಿಚಾರದಲ್ಲೂ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುವುದು ನಿಲ್ಲಿಸಲಿ. ರಾಜ್ಯ ಸರ್ಕಾರ ಸಂತ್ರಸ್ತರ ನೆರವಿಗೆ ಎಲ್ಲ ಕ್ರಮ ಕೈಗೊಂಡಿದೆ. ತುರ್ತು ಪರಿಹಾರಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸಲಾಗಿದೆ ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News