ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ವಾಗ್ದಾಳಿ

Update: 2019-09-18 05:29 GMT

ಬೆಂಗಳೂರು, ಸೆ.18: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿರುವ ಡಾ.ಸುಧಾಕರ್, ‘’ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಎಂದು ಟೀಕಿಸಿದ್ದಾರೆ.

‘’ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು.  ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆಗಳಿಂದ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿ ತಲುಪಿದೆ ಎಂದವರು ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News