ಕಾಮನ್ ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್: ಋತ್ವಿಕ್ ಅಲೆವೂರಾಯಗೆ ಅವಳಿ ಚಿನ್ನ

Update: 2019-09-18 07:48 GMT

ಮಂಗಳೂರು, ಸೆ.18: ಕೆನಡಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಅಂತರ್‌ರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್ ಚಾಂಪಿಯನ್ ಶಿಪ್ 83 ಕಿಲೋ ಸಬ್ ಜೂನಿಯರ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿರುವ ಋತ್ವಿಕ್ ಅಲೆವೂರಾಯ ಕೆ.ವಿ. ಎರಡು ಚಿನ್ನದ ಪದಕಗಳನ್ನು ಜಯಿಸಿದ್ದಾರೆ.

ಕ್ಲಾಸಿಕ್ ಮತ್ತು ಎಕ್ವಿಪ್ಡ್ ವಿಭಾಗದಲ್ಲಿ ಭಾರ ಎತ್ತಿ ಅವರು ಈ ಸಾಧನೆಗೈದಿದ್ದಾರೆ.

ವಾಸುದೇವ ಭಟ್ ಕುಂಜತ್ತೋಡಿ ಮತ್ತು ದೀಪಾ ದಂಪತಿ ಪುತ್ರರಾಗಿರುವ ಋತ್ವಿಕ್ ಅವರು ಪ್ರದೀಪ್ ಆಚಾರ್ಯರಿಂದ ತರಬೇತಿ ಪಡೆಯುತ್ತಿದ್ದಾರೆ. ಇವರು ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News