ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Update: 2019-09-18 10:41 GMT

ಹೊಸದಿಲ್ಲಿ, ಸೆ.18: ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹೊಸದಿಲ್ಲಿಯ ಪಿಎಂಎಲ್ಎ ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ (ಸೆ.19) ಮುಂದೂಡಲಾಗಿದೆ.

ಮಂಗಳವಾರ ಡಿಕೆಶಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಆರೋಗ್ಯ ತಪಾಸಣೆಯ ಅಗತ್ಯವಿದೆಯೆಂದು ಡಿಕೆಶಿ ಪರ ವಕೀಲರು ಮನವಿ ಮಾಡಿದ್ದರಿಂದ ಡಿಕೆಶಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದರು. ಅದರಂತೆ ಡಿಕೆಶಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಆದರೆ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿತು.

ಹೊಸದಿಲ್ಲಿ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸೆ.16ರಂದು ಈಡಿ ಅಧಿಕಾರಿಗಳು ಹೊಸದಿಲ್ಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News