ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕಳವು ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾದ !

Update: 2019-09-18 12:12 GMT

ಲುಧಿಯಾನಾ, (ಪಂಜಾಬ್), ಸೆ.18: ಮನೆಯ ಹೊರಗೆ ತಾಯಿಯೊಂದಿಗೆ ಮಲಗಿದ್ದ ನಾಲ್ಕು ವರ್ಷದ ಮಗುವನ್ನು ವ್ಯಕ್ತಿಯೊಬ್ಬನು  ಕಳವು ಮಾಡಲು  ಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ಪಂಜಾಬ್‌ನ ಲುಧಿಯಾನದ ರಿಷಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

ಕಳ್ಳ ಮಗುವನ್ನು ಅಪಹರಿಸಲು ಯತ್ನಿಸಿದ ಘಟನೆಯ ದೃಶ್ಯ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ .

ಮನೆಯ ಹೊರಗಡೆ ತಾಯಿ ಮತ್ತು ಅಜ್ಜಿಯ ಪಕ್ಕದಲ್ಲಿ ಹಾಸಿಗೆಯ ಮೇಲೆ ಮಲಗಿದ್ದ ಮಗುವನ್ನು ಸೈಕಲ್ ರಿಕ್ಷಾದಲ್ಲಿ ಬಂದ ಆರೋಪಿ ಕದಿಯಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯು ಮಗುವನ್ನು ಎತ್ತಿಕೊಂಡು ತನ್ನ ಸೈಕಲ್ ರಿಕ್ಷಾದಲ್ಲಿ ಮಲಗಿಸಿದ್ದಾನೆ. ಇನ್ನೇನು ಅಲ್ಲಿಂದ ಪರಾರಿಯಾಗುವ ಯತ್ನದಲ್ಲಿದ್ದಾಗ ಎಚ್ಚರಗೊಂಡ ಮಗುವಿನ ತಾಯಿ ಮಗುವನ್ನು ಕಿತ್ತುಕೊಂಡಿದ್ದಾರೆ. ಆಗ ಕಳ್ಳ ಓಡಿಹೋಗಲು ಪ್ರಯತ್ನಿಸಿದ್ದಾನೆ. ಅವನನ್ನು ಮಹಿಳೆಯೊಬ್ಬರು ಬೆನ್ನಟ್ಟಿದ್ದಾರೆ. ಸ್ಥಳೀಯರು ನೆರವಿನಿಂದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News