ಪಶ್ಚಿಮ ಬಂಗಾಳದ ಹೆಸರನ್ನು ‘ಬಾಂಗ್ಲಾ’ ಎಂದು ಬದಲಾಯಿಸಲು ಪ್ರಧಾನಿಗೆ ಸಿಎಂ ಮಮತಾ ಮನವಿ

Update: 2019-09-18 13:34 GMT

ಹೊಸದಿಲ್ಲಿ, ಸೆ.18: ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಅವರು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬುಧವಾರ ಹೊಸದಿಲ್ಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಪ್ರಧಾನಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಅವರೊಂದಿಗಿನ ಭೇಟಿ  ಉತ್ತಮವಾಗಿತ್ತು. ಪಶ್ಚಿಮ ಬಂಗಾಳದ ಹೆಸರನ್ನು 'ಬಾಂಗ್ಲಾ' ಎಂದು ಬದಲಾಯಿಸುವ ಕುರಿತು ನಾವು ಚರ್ಚಿಸಿದ್ದೇವೆ. ಈ ವಿಷಯದ ಬಗ್ಗೆ ಪರಿಶೀಲಿಸುವುದಾಗಿ ಪ್ರಧಾನಿ ಮೋದಿ  ಭರವಸೆ ನೀಡಿದ್ದಾರೆ ಎಂದು ಮಮತಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News