ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2019-09-18 13:57 GMT

ಮಂಗಳೂರು, ಸೆ.18: ವಿಶ್ವಕರ್ಮ ಸಮುದಾಯದವರು ಈ ದೇಶದಲ್ಲಿ ಕಲೆ ಮತ್ತು ವಾಸ್ತುಶಿಲ್ಪ ಮತ್ತು ಕರಕುಶಲತೆಗೆ ನೀಡಿದ ಕೊಡುಗೆ ಅಪಾರ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ದ.ಕ.ಜಿಲ್ಲಾಡಳಿತ, ದ.ಕ.ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ 'ವಿಶ್ವಕರ್ಮ ಜಯಂತಿ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಅದೇ ರೀತಿ ಸಮುದಾಯದ ಮೂಲ ಕಸಬನ್ನು ಇನ್ನೂ ಅತ್ಯಂತ ಜನಪ್ರಿಯಗೊಳಿಸಲು ಮತ್ತು ಕಲಾ ಕೌಶಲಗಳನ್ನು ಮುಂದಿನ ಪೀಳಿಗೆಗೆ ನೀಡುವಂತಾಗಲುಇದು ಸಹಕಾರಿಯಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸಹ ಚಿಂತನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕ ಬಿ.ಅನಂತಯ್ಯ ಆಚಾರ್ಯ ಮಣಿಪಾಲ್ ಉಪನ್ಯಾಸ ನೀಡಿದರು.

ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ತಹಶೀಲ್ದಾರ್ ಗುರುಪ್ರಸಾದ್, ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಕೆ. ಕೇಶವ ಆಚಾರ್ಯ, ಸುಂದರ ಆಚಾರ್ಯ ಬೆಳುವಾಯಿ, ಲೋಕೇಶ ಆಚಾರ್ಯ ಬಿಜೈ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News