ಉಡುಪಿ: ಫೆಲೋಶಿಪ್‌ಗೆ ಅರ್ಜಿ ಆಹ್ವಾನ

Update: 2019-09-18 14:53 GMT

 ಉಡುಪಿ, ಸೆ.18: 2019-20ನೇ ಸಾಲಿಗೆ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆ.30 ಆಗಿದ್ದು, ವಿವರಗಳಿಗೆ ವೆಬ್‌ಸೈಟ್ www.backwardclasses.kar.nic.in-ಅನ್ನು ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0820-2574881 ಹಾಗೂ 0820-2573881ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News