×
Ad

ಮಂಗಳೂರು: ಕೊಲೆಯತ್ನ ಪ್ರಕರಣ; ಆರೋಪಿ ಬಂಧನ

Update: 2019-09-18 20:34 IST
ಇರ್ಫಾನ್

ಮಂಗಳೂರು, ಸೆ.18: ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಮಸೂದ್ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಸ್ಬಾ ಬೆಂಗ್ರೆಯ ಫುಟ್ಬಾಲ್ ಮೈದಾನ ಸಮೀಪ ಪೊಲೀಸರು ಬಂಧಿಸಿದ್ದಾರೆ.

ಕಸ್ಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಇರ್ಫಾನ್ (22) ಬಂಧಿತ ಆರೋಪಿ.

2018ರ ನವೆಂಬರ್ 21ರಂದು ಕಸ್ಬಾ ಬೆಂಗ್ರೆಯಲ್ಲಿ ಮಸೂದ್ ಎಂಬವರನ್ನು ದುಷ್ಕರ್ಮಿಗಳು ಕೊಲೆಗೈಯಲು ಯತ್ನಿಸಿದ್ದರು. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್‌ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News