ಸಕಾಲ ಸೇವೆಯನ್ನು ಯೋಜನೆ ಹೊರತಾಗಿಸಿದರೆ ಕ್ರಿಮಿನಲ್ ದಾವೆ: ಅಧಿಕಾರಿಗಳಿಗೆ ಉಡುಪಿ ಎಡಿಸಿ ಎಚ್ಚರಿಕೆ

Update: 2019-09-18 16:02 GMT

ಉಡುಪಿ, ಸೆ.18: ಸಾರ್ವಜನಿಕರಿಗೆ ಸಕಾಲ ಯೋಜನೆಯಲ್ಲಿ ಅಳವಡಿಸಿರುವ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕವೇ ಸ್ವೀಕರಿಸಿ, ಸೇವೆಗಳನ್ನು ಒದಗಿಸಬೇಕು. ಸಕಾಲ ತಂತ್ರಾಂಶವನ್ನು ಬೈಪಾಸ್ ಮಾಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಕಾಲ ಸೇವೆಗಳ ಅಧಿನಿಯಮದ ಸಮರ್ಪಕ ಅನುಷ್ಟಾನ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಸರಕಾರವು ಸಾರ್ವಜನಿಕರಿಗೆ ಶೀಘ್ರದಲ್ಲಿ ಅಗತ್ಯ ಸೇವೆಗಳು ದೊರಕಬೇಕೆಂಬ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಪಡೆಯುವ ದಾಖಲೆಗಳಿಗೆ ಅಧಿಕೃತ ಮಾನ್ಯತೆ ಸಹ ಇರುವುದರಿಂದ, ಸಾರ್ವಜನಿಕರಿಗೆ ಸಕಾಲ ತಂತ್ರಾಂಶದ ಮೂಲಕವೇ ನಿಗದಿಪಡಿಸಿರುವ ಸೇವೆಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು. ನಿಗದಿಪಡಿಸಿದ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕ ನೀಡದೇ ಬೈಪಾಸ್ ಮಾಡುವ ಅಧಿಕಾರಿಗಳ ವಿರುದ್ದ ಕ್ರಿುನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಿದರು.

ಸರಕಾರವು ಸಾರ್ವಜನಿಕರಿಗೆ ಶೀಘ್ರದಲ್ಲಿ ಅಗತ್ಯ ಸೇವೆಗಳು ದೊರಕಬೇಕೆಂಬ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಪಡೆಯುವ ದಾಖಲೆಗಳಿಗೆ ಅಧಿಕೃತ ಮಾನ್ಯತೆ ಸಹ ಇರುವುದರಿಂದ, ಸಾರ್ವಜನಿಕರಿಗೆ ಸಕಾಲ ತಂತ್ರಾಂಶದ ಮೂಲಕವೇ ನಿಗದಿಪಡಿಸಿರುವ ಸೇವೆಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು. ನಿಗದಿಪಡಿಸಿದ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕ ನೀಡದೇ ಬೈಪಾಸ್ ಮಾಡುವ ಅಧಿಕಾರಿಗಳ ವಿರುದ್ದ ಕ್ರಿುನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಿದರು.

98 ಗ್ರಾಪಂಗಳಲ್ಲಿ ಶೂನ್ಯ ಸಾಧನೆ: ಸಕಾಲ ವ್ಯಾಪ್ತಿಯಲ್ಲಿ ಬಹುತೇಕ ಎಲ್ಲಾ ಇಲಾಖೆಗಳ ಸೇವೆಗಳು ಲಭ್ಯವಿದ್ದು, ಸಕಾಲ ತಂತ್ರಾಂಶದ ಮೂಲಕ ಈ ಸೇವೆಗಳನ್ನು ಒದಗಿಸದೇ ಇದ್ದಲ್ಲಿ ಅಂತಹ ಇಲಾಖೆಯ ಪ್ರಗತಿ ಶೂನ್ಯ ಎಂದು ದಾಖಲಾಗಲಿದೆ. ಆಗಸ್ಟ್ ತಿಂಗಳಲ್ಲಿ ಜಿಲ್ಲೆಯ 98 ಗ್ರಾಪಂಗಳು ಸಕಾಲ ತಂತ್ರಾಂಶದ ಮೂಲಕ ಯಾವುದೇ ಸೇವೆ ನೀಡದ ಕಾರಣ ಶೂನ್ಯ ಪ್ರಗತಿಯಾಗಿದೆ. ಇಂತಹ ಗ್ರಾಪಂಗಳಿಗೆ ನೋಟೀಸ್ ನೀಡಲಾಗಿದೆ. ರಾಜ್ಯ ಮಟ್ಟದಲ್ಲಿ ಯಾವುದೇ ಯೋಜನೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ, ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಸಕಾಲ ಅರ್ಜಿ ಪ್ರಗತಿಯಲ್ಲಿ ಕೆಲವು ತಿಂಗಳಿಂದ ಅಗ್ರಸ್ಥಾನ ಪಡೆಯುವಲ್ಲಿ ಉಡುಪಿ ವಿಫಲವಾಗಿದೆ ಎಂದು ಸದಾಶಿವ ಪ್ರಭು ತಿಳಿಸಿದರು.

 ಸಕಾಲ ಯೋಜನೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ ಮೇಲೆ ಕೊನೆಯ ದಿನದವರೆಗೂ ಕಾಯದೇ ಶೀಘ್ರದಲ್ಲಿ ಸೇವೆಗಳನ್ನು ಒದಗಿಸಿದಲ್ಲಿ ಜಿಲ್ಲೆಯ ರ್ಯಾಂಕಿಂಗ್ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೇ ಅರ್ಜಿಗಳ ಸ್ವೀಕಾರವನ್ನು ತಂತ್ರಾಂಶದ ಮೂಲಕವೇ ಸ್ವೀಕರಿಸುವಂತೆ ತಿಳಿಸಿದ ಎಡಿಸಿ, ಜಿಲ್ಲೆಯು ಸಕಾಲ ಯೋಜನೆಯಲ್ಲಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆಯುವಲ್ಲಿ ಎಲ್ಲಾ ಅಧಿಕಾರಿ ಗಳ ಸಹಕಾರ ಅಗತ್ಯ ಮತ್ತು ಹೊಸದಾಗಿ ಸಕಾಲ ಯೋಜನೆಗೆ ಸೇರ್ಪಡೆಯಾದ ಇಲಾಖೆಗಳಿಗೆ ತರಬೇತಿಯ ಅಗತ್ಯವಿದ್ದಲ್ಲಿ ಅಥವಾ ಅನುಷ್ಠಾನದಲ್ಲಿ ತೊಂದರೆ ಯಿದ್ದಲ್ಲಿ ಜಿಲ್ಲಾ ಸಕಾಲ ನೋಡೆಲ್ ಅಧಿಕಾರಿಗಳ ನೆರವು ಪಡೆಯುವಂತೆ ಅವರು ತಿಳಿಸಿದರು.

ಸಕಾಲ ಯೋಜನೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ ಮೇಲೆ ಕೊನೆಯ ದಿನದವರೆಗೂ ಕಾಯದೇ ಶೀಘ್ರದಲ್ಲಿ ಸೇವೆಗಳನ್ನು ಒದಗಿಸಿದಲ್ಲಿ ಜಿಲ್ಲೆಯ ರ್ಯಾಂಕಿಂಗ್ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೇ ಅರ್ಜಿಗಳ ಸ್ವೀಕಾರವನ್ನು ತಂತ್ರಾಂಶದ ಮೂಲಕವೇ ಸ್ವೀಕರಿಸುವಂತೆ ತಿಳಿಸಿದ ಎಡಿಸಿ, ಜಿಲ್ಲೆಯು ಸಕಾಲ ಯೋಜನೆಯಲ್ಲಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆಯುವಲ್ಲಿ ಎಲ್ಲಾ ಅಧಿಕಾರಿ ಗಳ ಸಹಕಾರ ಅಗತ್ಯ ಮತ್ತು ಹೊಸದಾಗಿ ಸಕಾಲ ಯೋಜನೆಗೆ ಸೇರ್ಪಡೆಯಾದ ಇಲಾಖೆಗಳಿಗೆ ತರಬೇತಿಯ ಅಗತ್ಯವಿದ್ದಲ್ಲಿ ಅಥವಾ ಅನುಷ್ಠಾನದಲ್ಲಿ ತೊಂದರೆ ಯಿದ್ದಲ್ಲಿ ಜಿಲ್ಲಾ ಸಕಾಲ ನೋಡೆಲ್ ಅಧಿಕಾರಿಗಳ ನೆರವು ಪಡೆಯುವಂತೆ ಅವರು ತಿಳಿಸಿದರು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯಲ್ಲಿ ಸಕಾಲ ಯೋಜನೆಯಡಿ ನೀಡುವ ಸೇವೆಗಳ ಕುರಿತ ಫಲಕವನ್ನು ಕಚೇರಿಯ ಮುಂಭಾಗದಲ್ಲಿ ಅಳವಡಿಸುವಂತೆ ಅವರು ತಿಳಿಸಿದರು. ರಾಜ್ಯದ ಸಕಾಲ ಮಿಷನ್ ಅಧಿಕಾರಿಗಳು ರಾಜ್ಯದಾದ್ಯಂತ ಎಲ್ಲಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅವರು ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಯಾವುದೇ ಇಲಾಖೆಯಲ್ಲಿ ಸಕಾಲ ಸೇವೆಯನ್ನು ಒದಗಿಸುವಲ್ಲಿ ಲೋಪ ಕಂಡುಬರಬಾರದು ಎಂದು ಎಡಿಸಿ ಹೇಳಿದರು.

ಸಭೆಯಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News