ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ: ಡಿಸಿಎಂ ಗೋವಿಂದ ಕಾರಜೋಳ

Update: 2019-09-18 16:12 GMT

ಬೆಂಗಳೂರು, ಸೆ. 18: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಚರಿಸಲಾಗುವುದು. ಸಾಮಾಜಿಕ, ಸಾಹಿತ್ಯ ಹಾಗು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಮೆರವಣಿಗೆಯು ಮಹರ್ಷಿ ವಾಲ್ಮೀಕಿ ಪುತ್ಥಳಿಯವರೆಗೆ ಆಗಮಿಸಲಿದೆ. ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ವಿವಿಧ 10 ಕಲಾ ತಂಡಗಳು ಪಾಲ್ಗೊಳ್ಳಲಿವೆ. ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಸಮಾಜದ ಬಂಧುಗಳು ಸ್ವಯಂ ಪ್ರೇರಿತವಾಗಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.

ಕಾರ್ಯಕ್ರಮವನ್ನು ಎಲ್ಲ ಜಿಲ್ಲೆಗಳಲ್ಲಿ ಆಚರಿಸುವಂತೆ ಸುತ್ತೋಲೆಯನ್ನು ಹೊರಡಿಸಲಾಗುವುದು. ಅಂಬಿಗರ ಚೌಡಯ್ಯ, ಶಿವಾಜಿ, ಬಸವ ಜಯಂತಿ ಕಾರ್ಯಕ್ರಮಗಳನ್ನು ಸರಕಾರಿ ಕಾರ್ಯಕ್ರಮಗಳನ್ನಾಗಿ ಆಚರಿಸಲು ತಾವು ವಹಿಸಿದ್ದ ಶ್ರಮವನ್ನು ಅವರು ಸ್ಮರಿಸಿದರು.

ರಾಜನಹಳ್ಳಿ ಮಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸುವಂತೆ ಸಲಹೆ ಸೂಚನೆ ನೀಡಿದರು. ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಸಲಹೆಗಾರ ಇ.ವೆಂಕಟಯ್ಯ, ಇಲಾಖೆಯ ಆಯುಕ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News