ಉಡುಪಿ: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

Update: 2019-09-18 16:19 GMT

ಉಡುಪಿ, ಸೆ.18:ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ತಮ್ಮ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕ ಒತ್ತನ್ನು ನೀಡಿದರೆ ಸಂಸ್ಥೆಗೆ ಹಾಗೂ ಸಮಾಜಕ್ಕೆ ಪರಿಣಾಮಕಾರಿಯಾದ ಕೊಡುಗೆಯನ್ನು ನೀಡಬಹುದು ಎಂದು ಜಿಪಂ ಸದಸ್ಯ ಜನಾರ್ದನ ತೋನ್ಸೆ ಹೇಳಿದ್ದಾರೆ. ಇತ್ತೀಚೆಗೆ ತೆಂಕನಿಡಿಯೂರು ಗ್ರಾಪಂ ಸಭಾಂಗಣದಲ್ಲಿ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2019-20ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಮಾತನಾಡಿ, ಕಾಲೇಜು ಕಳೆದ 26 ವರ್ಷಗಳಿಂದ ನಡೆದು ಬಂದ ದಾರಿಯನ್ನು ವಿವರಿಸಿ ಕಳೆದ ಸಾಲಿನಲ್ಲಿ ಕಾಲೇಜು ಸಾಧಿಸಿದ ವಿವಿಧ ಸಾಧನೆಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿ ಕ್ಷೇಮಪಾಲನಾ ಸುತಿಯ ಮೂಲಕ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನದ ದಿಗಂತವನ್ನು ವಿಸ್ತರಿಸಿಕೊಳ್ಳಬೇಕು. ಕಾಲದ ಅವಶ್ಯಕತೆಗೆ ತಕ್ಕಂತೆ ಹೊಸದನ್ನು ಕಾಣುವುದರ ಜೊತೆಗೆ ವಿಜ್ಞಾನ ತಂತ್ರಜ್ಞಾನದೊಂದಿಗೆ ತಮ್ಮನ್ನು ತಾವು ಪರಿಷ್ಕರಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಸಾದ್ ರಾವ್ ಎಂ., ರಾಧಾಕೃಷ್ಣ, ದಯಾನಂದ ಶೆಟ್ಟಿ ಕೊಜಕುಳಿ ಹಾಗೂ ಇತರರು ಉಪಸ್ಥಿತರಿದ್ದರು. ಸಮಿತಿಯ ಅಧ್ಯಕ್ಷ ಅರುಲ್ ಸ್ವಾಗತಿಸಿ, ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪೂಜಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News