ಇನ್ನು ಮುಂದೆ ಬಸ್ ಚಾಲಕರಿಗೂ ಸೀಟ್ ಬೆಲ್ಟ್ ಕಡ್ಡಾಯ

Update: 2019-09-18 16:43 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.18: ಕಾರುಗಳಿಗೆ ಸೀಮಿತವಾಗಿದ್ದ ಸೀಟ್‌ಬೆಲ್ಟ್ ಅನ್ನು ಇನ್ನು ಮುಂದೆ ಬಸ್‌ಗಳಿಗೂ ಅನ್ವಯಿಸಿದ್ದು, ತಪ್ಪಿದಲ್ಲಿ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಬಸ್ ಚಾಲಕರಿಗೂ ನಿಯಮದಂತೆ ಸೀಟ್‌ಬೆಲ್ಟ್ ಕಡ್ಡಾಯವಾಗಿದ್ದು, ಇದನ್ನು ಪಾಲಿಸದಿದ್ದಲ್ಲಿ ಒಂದು ಸಾವಿರ ದಂಡ ವಿಧಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಬಿಎಂಟಿಸಿ, ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ನಿಗಮಗಳ ಚಾಲಕರು ಇನ್ನು ಮುಂದೆ ಸೀಟ್ ಬೆಲ್ಟ್ ಹಾಕದೆ ಬಸ್ಸನ್ನು ಚಲಾಯಿಸುವಂತಿಲ್ಲ. ಇಂತಹ ನಿಯಮವನ್ನು ಕಡ್ಡಾಯಗೊಳಿಸಲು ಮುಂದಾಗಿದೆ.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಲ್ಲಿ ಮೋಟಾರು ವಾಹನ ಕಾಯ್ದೆಯಲ್ಲಿ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಸಾರಿಗೆ ಇಲಾಖೆ ಕಡ್ಡಾಯಗೊಳಿಸುವ ತೀರ್ಮಾನವನ್ನು ಬಸ್ ಚಾಲಕರು ಸ್ವಾಗತಿಸಿದ್ದಾರೆ. ದುಬಾರಿ ದಂಡ ಪ್ರಯೋಗಕ್ಕೆ ಬ್ರೇಕ್ ಹಾಕುವ ಸರಕಾರದ ಆದೇಶದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಪರಿಷ್ಕೃತ ದರದ ವರದಿಯನ್ನು ಸರಕಾರಕ್ಕೆ ರವಾನಿಸಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News