ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಡಿಕೆ ಶಿವಕುಮಾರ್

Update: 2019-09-19 07:48 GMT

ಹೊಸದಿಲ್ಲಿ, ಸೆ.19: ದಿಲ್ಲಿ ನಿವಾಸದಲ್ಲಿ ಅಕ್ರಮವಾಗಿ ಪತ್ತೆಯಾದ 8.6 ಕೋಟಿ ರೂ. ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಕರ್ನಾಟಕದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಲ್ಲಿನ ಆರ್‌ಎಂಎಲ್ ಆಸ್ಪತ್ರೆಯಿಂದ ತಿಹಾರ್ ಕೇಂದ್ರ ಕಾರಾಗೃಹಕ್ಕೆ ಗುರುವಾರ ಸ್ಥಳಾಂತರಿಸಲಾಗಿದೆ.

ಕಳೆದ ಎರಡು ದಿನಗಳಿಂದ ಹೈ ಬಿಪಿ, ಎದೆ ನೋವು ಹಿನ್ನೆಲೆಯಲ್ಲಿ ಶಿವಕುಮಾರ್ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ವೈದ್ಯರು ಶಿವಕುಮಾರ್ ಅವರ ಆರೋಗ್ಯ ಸ್ಥಿರ ವಾಗಿದೆ ಎಂದು ವರದಿ ನೀಡಿದ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ಕಳುಹಿಸಿಕೊಡಲಾಗಿದೆ.

 ಈಗಾಗಲೇ ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಈ.ಡಿ.ಯಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಇರಿಸಲಾಗಿರುವ ಬ್ಯಾರಕ್ ಸಂಖ್ಯೆ-7ರಲ್ಲಿ ಶಿವಕುಮಾರ್‌ರನ್ನು ಇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಶಿವಕುಮಾರ್‌ಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಇದೇ ವೇಳೆ,ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News