ಆಟೊ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Update: 2019-09-19 12:41 GMT

ಬೆಂಗಳೂರು, ಸೆ.19: ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬಕೆ ಮೃತಪಟ್ಟಿರುವ ಘಟನೆ ಇಲ್ಲಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಗೇರಿ ನಿವಾಸಿ ನಸೀಬಾಜಾನ್ (43) ಎಂಬುವರು ಮೃತಪಟ್ಟಿದ್ದು, ಘಟನೆಯಲ್ಲಿ ಇವರ ಪುತ್ರಿ ಸಬೀಹಾ ಎಂಬಾಕೆ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರ್ ಇಂಜಿನಿಯರಿಂಗ್ ಕಾಲೇಜು ಬಳಿಯ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ತಾಯಿ-ಮಗಳು ಕಳೆದ ಸೆ.17ರಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಆಟೊ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ

ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ನಸೀಬಾಜಾನ್ ಅನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾುತಾದರೂ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಕೆಂಗೇರಿ ಸಂಚಾರ ಪೊಲೀಸರು ಅಪಘಾತವೆಸಗಿದ ಆಟೊಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News