ಕೋಡಿ ಬ್ಯಾರೀಸ್ ವಾಲಿಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

Update: 2019-09-19 15:53 GMT

ಕುಂದಾಪುರ, ಸೆ.19: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೋಟ ವಿವೇಕ ಕಾಲೇಜಿನ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರ ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

 ಈ ತಂಡ ಸತತ ಆರನೆ ಬಾರಿ ತಾಲೂಕು ಮಟ್ಟದಲ್ಲಿ ವಿಜೇತರಾಗಿದ್ದು, ಜಿಲ್ಲಾ ಮಟ್ಟದಲ್ಲಿ ನಾಲ್ಕನೆ ಬಾರಿ ಚಾಂಪಿಯನ್ ಪಡೆದಿದ್ದಾರೆ.

ತಂಡದೊಂದಿಗೆ ಸಂಸ್ಥೆಯ ಸಂಚಾಲಕ ಸಯ್ಯದ್ ಮಹಮ್ಮದ್ ಬ್ಯಾರಿ, ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್, ಪ್ರಾಂಶುಪಾಲ ಡಾ.ಶಮೀರ್, ನಿವೃತ್ತ ಪ್ರಾಂಶುಪಾಲ ಪ್ರೊ.ದೋಮ ಚಂದ್ರಶೇಖರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಇಲ್ಯಾಸ್ ಹಾಗೂ ವೀಣಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News