ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Update: 2019-09-19 16:11 GMT

ಉಡುಪಿ, ಸೆ.19: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮತದಾರರ ಪರಿಶೀಲನಾ ಕಾರ್ಯಕ್ರಮವು (ಇವಿಪಿ) ಅ.15ರವರೆಗೆ ನಡೆಯಲಿದೆ.

ಈ ಸಂದರ್ಭದಲ್ಲಿ ಜಿಲ್ಲೆಯ ನಾಗರಿಕರು ಪ್ರಸ್ತುತವಿರುವ ಮತದಾರರ ಪಟ್ಟಿಯಲ್ಲಿ ಅವರ ಮಾಹಿತಿಯನ್ನು ಮತದಾರರ ಸಹಾಯವಾಣಿ ಮೊಬೈಲ್ ಆ್ಯಪ್ (ವೋಟರ್ಸ್‌ ಹೆಲ್ಫ್‌ಲೈನ್), ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ), ಮತದಾರರ ನೋಂದಣಿ ಅಧಿಕಾರಿಗಳ ಕಚೇರಿಯ ಮತದಾರರ ಪೂರಕ ಕೇಂದ್ರ, ಉಡುಪಿ ಒನ್/ಕರ್ನಾಟಕ ಒನ್, 1950 (ಮತದಾರರ ಸಹಾಯವಾಣಿ ಕೇಂದ್ರ) ಕೇಂದ್ರ/ ವೆಬ್‌ಸೈಟ್ www.nvsp.in ಮುಖಾಂತರ ಮತದಾರರ ಪಟ್ಟಿಯಲ್ಲಿ ನಮೂದಾಗಿರುವ ವಿವರಗಳು ಸರಿ ಇವೆಯೇ ಎಂದು ಪರಿಶೀಲಿಸಿ ದೃಢೀಕರಿಸಿಕೊಳ್ಳಬಹುದಾಗಿದೆ.

ಜಿಲ್ಲೆಯ ಪ್ರತಿಯೊಬ್ಬ ಮತದಾರರು ಅವರ ವಿವರಗಳನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ, ತಿದ್ದುಪಡಿಗಳು ಇದ್ದಲ್ಲಿ ಸರಿಪಡಿಸಿ ದೃಢಪಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News