ಕೆಪಿಎಸ್ಸಿ: 661 ಬೆರಳಚ್ಚುಗಾರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Update: 2019-09-19 16:24 GMT

ಬೆಂಗಳೂರು,ಸೆ.19: ಕರ್ನಾಟಕ ಲೋಕಸೇವಾ ಆಯೋಗ, ರಾಜ್ಯ ಸರಕಾರದ 38 ಇಲಾಖೆಗಳಲ್ಲಿ ಖಾಲಿ ಇರುವ 661 ಬೆರಳಚ್ಚುಗಾರ ಹುದ್ದೆಗಳಿಗೆ ಸೆ.18ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ. 

ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಸದರಿ ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 7 ದಿನಗಳ ಒಳಗೆ ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-1 ಇವರಿಗೆ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News