ಶಬ್ದ ಮಾಲಿನ್ಯ ತಡೆಗೆ 6.99 ಕೋಟಿ ಬಿಡುಗಡೆಗೆ ಪ್ರಸ್ತಾಪ: ಸರಕಾರದಿಂದ ಹೈಕೋರ್ಟ್‌ಗೆ ಮಾಹಿತಿ

Update: 2019-09-19 16:27 GMT

ಬೆಂಗಳೂರು, ಸೆ.19: ಇಂದಿರಾನಗರದಲ್ಲಿ ಪಬ್ ಹಾಗೂ ರೆಸ್ಟೋರೆಂಟ್‌ಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ 233 ಶಬ್ದಮಾಲಿನ್ಯ ಉಪಕರಣಗಳನ್ನು ಖರೀದಿಸಲು, 6.99 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತು ಇಂದಿರಾನಗರದಲ್ಲಿ ಮಿತಿ ಮೀರಿದ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಸರಕಾರದ ಪರ ವಾದಿಸಿದ ವಕೀಲರು, ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಪಬ್‌ಗಳ ಪರವಾನಗಿ ಹಿಂಪಡೆಯಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಪರಿಸರ ಸಂರಕ್ಷಣೆ ಕಾಯ್ದೆ ಸೆಕ್ಷನ್ 19ರ ಪ್ರಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿತು. ಪಬ್‌ಗಳು ಮಾತ್ರವಲ್ಲದೇ, ಶಬ್ದ ಮಾಲಿನ್ಯ ಉಂಟು ಮಾಡುವ ಎಲ್ಲರ ವಿರುದ್ಧವೂ ಕ್ರಮ ಜರುಗಿಸಿ, ಬೆಂಗಳೂರು ನಗರ ಸೇರಿ ರಾಜ್ಯದ ಎಲ್ಲ ಪ್ರಮುಖ ನಗರಗಳಲ್ಲೂ ಶಬ್ದ ಮಾಲಿನ್ಯ ಮಾಪಕ ಅಳವಡಿಸಿ ಎಂದು ಸರಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News