ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ಝಾಕ್ವಿಕ್ ಕ್ಯೂ ಟೀಮ್ ಕ್ಯಾಂಪ್

Update: 2019-09-20 04:37 GMT

ಕೊಣಾಜೆ, ಸೆ.20: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ಸಕ್ರಿಯ ಕಾರ್ಯಕರ್ತರ ತಂಡವಾದ ಕ್ಯೂ ಟೀಮ್ ಕ್ರಿಯಾಶೀಲತೆಗೆ  ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ಝಾಕ್ವಿಕ್ ಕ್ಯೂ ಟೀಮ್ ಮೆಂಬರ್ಸ್ ಮೀಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಅಧ್ಯಕ್ಷತೆಯಲ್ಲಿ  ಅಲ್- ಮದೀನಾ ಹಾಲ್ ತಿಬ್ಲೆಪದವುವಿನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯ ಸೈಯದ್ ಖುಬೈಬ್ ತಂಙಳ್ ದುಆಗೈದರು. 

ಕಾರ್ಯಕ್ರಮವನ್ನು ಅಲ್- ಮದೀನಾ ಆಂಗ್ಲ ಮಾಧ್ಯಮ ಶಾಲೆಯ ನಿರ್ದೇಶಕ ಮುಹಮ್ಮದ್ ಕುಂಞಿ ಅಂಜದಿ ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಸದಸ್ಯರಾದ ನೌಫಲ್ ಸಖಾಫಿ ಕಳಸ ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಿ ರಾಜ್ಯ ಸಮಿತಿಯ ಸಕ್ರಿಯ ಕಾರ್ಯಕರ್ತರ ತಂಡವಾದ ಕ್ಯೂ ಟೀಮ್ ನ ಕಾರ್ಯಾಚರಣೆಯ ಬಗ್ಗೆ  ತರಗತಿ ನಡೆಸಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯೀಲ್ ಮಾಸ್ಟರ್ ಮೊಂಟೆಪದವು, ದ.ಕ. ಜಿಲ್ಲಾಧ್ಯಕ್ಷ ಇಬ್ರಾಹೀಂ ಸಖಾಫಿ ಸೆರ್ಕಳ, ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್ ಎಸ್ಸೆಸ್ಸೆಫ್ ಮುಖವಾಣಿ ಇಶಾರ ಪತ್ರಿಕೆಯ ಸದಸ್ಯತನ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸದಸ್ಯರಾದ ಶಾಕಿರ್ ಹಾಜಿ ಮಿತ್ತೂರು, ಮುಸ್ತಫ ಮಾಸ್ಟರ್ ಉಳ್ಳಾಲ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಕಾರ್ಯದರ್ಶಿ ರಶೀದ್ ಹಾಜಿ ವಗ್ಗ, ಎಸ್ಸೆಸ್ಸೆಫ್ ಈಸ್ಟ್ ಝೋನ್ ಅಧ್ಯಕ್ಷ ಅಯ್ಯೂಬ್ ಮಹ್ಲರಿ, ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ ತಿಂಗಳಾಡಿ, ವೆಸ್ಟ್ ಝೋನ್ ಕೋಶಾಧಿಕಾರಿ ಝೈನುಲ್ ಆಬಿದ್ ನಈಮಿ, ಉಪಾಧ್ಯಕ್ಷರಾದ ಫಾರೂಕ್ ಸಖಾಫಿ ಕೃಷ್ಣಾಪುರ, ನವಾಝ್ ಸಖಾಫಿ ಅಡ್ಯಾರ್ ಪದವು, ವೆಸ್ಟ್ ಝೋನ್ ಕ್ಯೂ ಟೀಮ್ ಅಡ್ಮಿನ್ ಅಕ್ಬರ್ ಅಲಿ ಮದನಿ ಮತ್ತಿತರರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರಲಿ ಕಾಟಿಪಳ್ಳ ಸ್ವಾಗತಿಸಿದರು. ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News