×
Ad

ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2019-09-20 20:39 IST

ಉಡುಪಿ, ಸೆ.20: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸರಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯ ಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ, ವಿದ್ಯಾಭ್ಯಾಸ ಮುಂದುವರಿ ಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ https:/gokdom.kar. nic.in ಅಥವಾ https://dom.karnataka.gov.in/udupi ನಿಂದ ಪಡೆದು ಭರ್ತಿಮಾಡಿ ಎಲ್ಲಾ ದಾಖಲೆಗಳನ್ನು ಪ್ರಾಂಶುಪಾಲರಿಂದ ದೃಢೀಕರಿಸಿ ಕಾಲೇಜಿನ ಮುಖಾಂತರ ಆಯಾ ತಾಲೂಕು ವ್ಯಾಪ್ತಿಗೆ ಬರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ ತಾಲೂಕು (ದೂರವಾಣಿ: 0820-2574596), ಕುಂದಾಪುರ ತಾಲೂಕು (08254-230370), ಕಾರ್ಕಳ ತಾಲೂಕು (08258-231101) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News