ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ

Update: 2019-09-20 15:11 GMT

ಉಡುಪಿ, ಸೆ.20: 2019-20ನೇ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಸಬಲೀಕರಣ ಉದ್ದೇಶಕ್ಕಾಗಿ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಕನಿಷ್ಟ 10 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸದಸ್ಯರಿರುವ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಮೂಹಿಕ ಉತ್ಪಾದನಾ/ಸೇವಾ ಘಟಕಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಜಂಟಿ ಖಾತೆಯನ್ನು ಆರಂಭಿಸಿ ಉತ್ತಮ ಆದಾಯ ಗಳಿಸುವ, ಉತ್ಪಾದನಾ / ಸೇವಾ ಘಟಕ ಆರಂಭಿಸಲು 2.50 ಲಕ್ಷ ರೂ. ಸಹಾಯಧನವನ್ನು ಮಂಜೂರು ಮಾಡಲಾಗುತ್ತದೆ. ಪ್ರತಿ ಸದಸ್ಯರಿಗೆ 25,000ರೂ.ನಂತೆ ಹಣವನ್ನು ನಿಗಮ ಭರಿಸುತ್ತದೆ. (15,000ರೂ. ಸಹಾಯಧನ ಮತ್ತು 10,000 ರೂ.ಬೀಜಧನ ಸಾಲ).

ಇದಕ್ಕಾಗಿ ಸ್ವ-ಸಹಾಯ ಸಂಘವು ನೋಂದಣಿಯಾಗಿರಬೇಕು ಹಾಗೂ ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಉಚಿತ ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆಯ ಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574884ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸಾ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News