ಸೆ.27ಕ್ಕೆ ಮೇಯರ್ ಚುನಾವಣೆಗೆ ಸಕಲ ಸಿದ್ಧತೆ: ಪ್ರಾದೇಶಿಕ ಚುನಾವಣಾಧಿಕಾರಿ ಹರ್ಷ ಗುಪ್ತ

Update: 2019-09-20 16:55 GMT

ಬೆಂಗಳೂರು, ಸೆ. 20: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಸೆ.27ಕ್ಕೆ ನಡೆಯಲಿದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ಹರ್ಷ ಗುಪ್ತ ತಿಳಿಸಿದ್ದಾರೆ.

ಶುಕ್ರವಾರ ಬಿಬಿಎಂಪಿಯ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಸಿದ್ಧತೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಯರ್ ಹಾಗೂ ಉಪ ಮೇಯರ್ ಅವಧಿ ಸೆ.28ಕ್ಕೆ ಮುಕ್ತಾಯಗೊಳ್ಳಲಿದ್ದು, ಸೆ.27ರಂದು ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದರು.

ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಸೆ.27ರ ಬೆಳ್ಳಗ್ಗೆ 9ಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗುವುದು. ಅಂದು ನಾಮಪತ್ರ ಪರಿಶೀಲನೆ ನಂತರ 11:30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು. ಚುನಾವಣಾ ಕಾರ್ಯದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದರು.

ಅನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ, ವಾರ್ತಾ ಇಲಾಖೆಯ ಅಧಿಕಾರಿಗಳ ನೆರವಿನಿಂದ ಮಾಧ್ಯಮದವರಿಗೆ ಪಾಸ್‌ಗಳನ್ನು ವಿತರಿಸಲಾಗುವುದು ಎಂದರು. ಸಭೆಯಲ್ಲಿ ಕೌನ್ಸಿಲ್ ಕಾರ್ಯದರ್ಶಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಹಲಸೂರು ಗೇಟ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ್‌ರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News