ಮಾದಕ ವಸ್ತು ಮಾರಾಟ ಆರೋಪ: ನೈಜೀರಿಯಾ ಪ್ರಜೆ ಬಂಧನ

Update: 2019-09-20 17:10 GMT

ಬೆಂಗಳೂರು, ಸೆ.20: ಕಾನೂನು ಬಾಹಿರವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1.70ಲಕ್ಷ ರೂ.ವೌಲ್ಯದ ಕೊಕೇನ್ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ನೈಜೀರಿಯಾ ಮೂಲದ ಎಕೇನೆ ಒಕೊಂಕ್ವೊ ಬಂಧಿತ ಆರೋಪಿ. ಈತ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಭೈರವೇಶ್ವರ ಲೇಔಟ್ 1ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದುಕೊಂಡು, ವೀಸಾ ನಿಯಮ ಉಲ್ಲಂಘಿಸಿ ನಗರದ ವಿವಿಧ ಸ್ಥಳಗಳಲ್ಲಿ ಪರಿಚಿತ ಗ್ರಾಹಕರಿಗೆ ಕೊಕೇನನ್ನು ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮನೆ ಮೇಲೆ ದಾಳಿ ಮಾಡಿ ನೈಜೇರಿಯಾ ಪ್ರಜೆಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News