ಕೋಲಾರ: ಕುಖ್ಯಾತ ದರೋಡೆಕೋರರ ಬಂಧನ- 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Update: 2019-09-20 18:08 GMT

ಕೋಲಾರ, ಸೆ.20: ಕೊಲೆ, ದರೋಡೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಅಂತರ್ ಜಿಲ್ಲಾ ಕುಖ್ಯಾತ ದರೋಡೆಕೋರರ ಗ್ಯಾಂಗ್ ಅನ್ನು ಕೋಲಾರ ಜಿಲ್ಲಾ ಪೋಲಿಸರು ಬಂಧಿಸಿದ್ದಾರೆ.

ಮನೆ ಕಳ್ಳತನ, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ನಗರ ಪ್ರದೇಶದಲ್ಲಿ ಮನೆ ಕಳ್ಳತನ ನಡೆಸುತ್ತಿದ್ದ ಸಂಜಯ್, ಶಂಕರ ಹಾಗೂ ಇನ್ನೊಂದು ಪ್ರಕರಣದಲ್ಲಿ ಕುಖ್ಯಾತ ದರೋಡೆಕೋರರಾದ ಚಂದ್ರಶೇಖರ್, ಧನಂಜಯ, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ. ಇವರು ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಹಲವು ಕಡೆ ಇಪ್ಪತ್ತಕ್ಕೂ ಹೆಚ್ಚು ದರೋಡೆ ಹಾಗೂ ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಕೋಲಾರ ಹೊರವಲಯದಲ್ಲಿರುವ ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.

ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News