ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನಲ್ಲಿ ಓರಿಯಂಟೇಶನ್

Update: 2019-09-20 18:24 GMT

ಮೂಡುಬಿದಿರೆ: ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 

ದೇಶದ ವಿವಿಧ ರಾಜ್ಯಗಳಿಂದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಬಿ. ಎನ್. ವೈ. ಎಸ್. ಪದವಿಗೆ ಸೇರ್ಪಡೆಗೊಂಡಿರುವುದು ಯೋಗ ಮತ್ತು ನ್ಯಾಚುರೋಪತಿ ವೈದ್ಯಕೀಯ ಪದ್ಧತಿಯೆಡೆಗೆ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ ಎಂದು ಆಳ್ವಾಸ್ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ  ಅಧ್ಯಕ್ಷತೆಯನ್ನು ವಹಿಸಿ ಹೇಳಿದರು. 

ಕೊಯಂಮುತ್ತೂರು ಆರ್. ಕೆ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶರಣ್ಯನ್ ಪಿ. ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ವನಿತಾ ಶೆಟ್ಟಿ, ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News