ಸ್ಮಾರ್ಟ್ ಸಿಟಿ ಯೋಜನೆ: ಅತ್ಯುತ್ತಮ ವ್ಯವಸ್ಥಾಪಕ ನಿರ್ದೇಶಕ ಪ್ರಶಸ್ತಿಗೆ ಭಾಜನರಾದ ಟಿ. ಭೂಬಾಲನ್

Update: 2019-09-20 18:33 GMT

ತುಮಕೂರು, ಸೆ.20: ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಟಿ. ಭೂಬಾಲನ್ ಅವರು Smart Cities Council India ವತಿಯಿಂದ 6ನೇ Smart Cities Summit ಅಂಗವಾಗಿ ಕೊಡಮಾಡುವ ಅತ್ಯುತ್ತಮ ವ್ಯವಸ್ಥಾಪಕ ನಿರ್ದೇಶಕ (Best MD&CEO Award) ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಪ್ರಶಸ್ತಿಯನ್ನು ಸೆಪ್ಟೆಂಬರ್ 24 ಹಾಗೂ 25ರಂದು ಬೆಂಗಳೂರಿನಲ್ಲಿ ನಡೆಯಲಿರುವ Smart Urbanation Convention and Expo 2019    ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ಟಿ.ಭೂಬಾಲನ್ ಅವರು 100 ಸ್ಮಾರ್ಟ್ ಸಿಟಿ ವ್ಯವಸ್ಥಾಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (MD&CEO)ಗಳ ಪೈಕಿ ಅತ್ಯುತ್ತಮ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿ ಕಾರಿಯಾಗಿ ಆಯ್ಕೆಯಾಗಿದ್ದಾರೆ.

ದೇಶದ 100 ಸ್ಮಾರ್ಟ್ ಸಿಟಿಗಳಲ್ಲಿ ಹಮ್ಮಿಕೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಗಳ ರೂಪುರೇಷೆಗಳನ್ನು ಮತ್ತು ಅನುಷ್ಠಾನವನ್ನು ಪರಿಶೀಲಿಸಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈಗಾಗಲೇ ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಕಾರ್ಯರೂಪಕ್ಕೆ ತರಲಾಗುತ್ತಿದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ.ಶಾಲಿನಿ ರಜನೀಶ್ ಅವರು ಪ್ರಶಸ್ತಿಗೆ ಭಾಜನರಾಗಿರುವ ಟಿ. ಭೂಬಾಲನ್ ಅವರನ್ನು ಅಭಿನಂದಿಸುತ್ತಾ, ಮುಂದಿನ ದಿನಗಳಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ತಂಡದವರು ಇನ್ನೂ ಹೆಚ್ಚಿನ ಶ್ರಮವಹಿಸಿ ನಗರವನ್ನು ಸ್ಮಾರ್ಟ್‍ ನಗರವನ್ನಾಗಿ ರೂಪಿಸಬೇಕೆಂದು ಆಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News