ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಅ.21ರಂದು ಉಪಚುನಾವಣೆ

Update: 2019-09-21 07:30 GMT

ಕಾಸರಗೋಡು, ಸೆ.21: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನ ನಿಗದಿಯಾಗಿದ್ದು, ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ.

 ಕೇಂದ್ರ ಚುನಾವಣಾ ಆಯೋಗವು ಇಂದು ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.

ಮಂಜೇಶ್ವರ ಶಾಸಕರಾಗಿದ್ದ ಮುಸ್ಲಿಂ ಲೀಗ್ ನ ಪಿ.ಬಿ.ಅಬ್ದುಲ್ ರಝಾಕ್ ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News