ಕುಡ್ಲೂರಿನಲ್ಲಿ ತಡೆಗೋಡೆಗೆ ಪಿಕಪ್ ಢಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

Update: 2019-09-21 14:10 GMT

ಚಿಕ್ಕಮಗಳೂರು, ಸೆ.21: ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ತರೀಕೆರೆ ತಾಲೂಕಿನ ಕುಡ್ಲೂರು ಬಳಿ ಶನಿವಾರ ನಡೆದಿದೆ.

ಮೃತರನ್ನು ಮುಹಮ್ಮದ್ ಅಲಿ(22) ಎಂದು ಗುರುತಿಸಲಾಗಿದೆ. ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಮುಹಮ್ಮದ್ ಅಲಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ತರೀಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News