ಉಪ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಕುಮಾರಸ್ವಾಮಿ

Update: 2019-09-21 10:33 GMT

ಮೈಸೂರು, ಸೆ.21: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಉಪ ಚುನಾವಣೆ ರಾಜ್ಯ ರಾಜಕೀಯದ ಮುಂದಿನ ಬೆಳವಣಿಗೆ ನಿರ್ಧರಿಸುತ್ತದೆ. ರಾಜ್ಯದ 15 ಕ್ಷೇತ್ರದ ಚುನಾವಣಾ ಫಲಿತಾಂಶ ರಾಜ್ಯ ರಾಜಕೀಯದ ಮುಂದಿನ ಬೆಳವಣಿಗೆ ನಿರ್ಧರಿಸುತ್ತದೆ ಎಂದರು.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಕಣಕ್ಕಿಳಿಸಲಾಗುವುದು. ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

15 ಉಪ ಚುನಾವಣೆಯಲ್ಲಿ ಕನಿಷ್ಠ 8 ಕ್ಷೇತ್ರಗಳಲ್ಲಿ ಆದರೂ ಜೆಡಿಎಸ್ ಗೆಲುವು ಸಾಧಿಸಲೇಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ರಾಜ್ಯ ಬಿಜೆಪಿ ಸರಕಾರ ಮುಂದುವರೆಯುದಿಲ್ಲ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ಶಾಸಕರನ್ನು ನಾವು ಖರೀದಿ ಮಾಡುವುದಿಲ್ಲ. ಉಪ ಚುನಾವಣೆಯ ಫಲಿತಾಂಶದ ದಿನವೇ ಈ ಸರ್ಕಾರ ಬೀಳುವ ಕೊನೆಯ ಗಡುವು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News