ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅನ್ಯಾಯ: ಆರೋಪ

Update: 2019-09-21 14:27 GMT

ಉಡುಪಿ, ಸೆ.21: ರಾಜ್ಯ ಬಿಜೆಪಿ ಸರಕಾರ ಹಾಗೂ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ 2018-19ನೇ ಸಾಲಿಗೆ ಅಲ್ಪಸಂಖ್ಯಾತರಿಗೆ ಮಂಜೂರಾದ ಅನುದಾನದಲ್ಲಿ ಶೇ.50ರಷ್ಟು ಕಡಿತ ಮಾಡುವ ಮೂಲಕ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಎಂ.ಪಿ. ಮೊಯ್ದಿನಬ್ಬ ಆರೋಪಿಸಿದ್ದಾರೆ.

2019-20ನೇ ಸಾಲಿನಲ್ಲಿ 14 ಯೋಜನೆಗಳ ಪೈಕಿ ಉಡುಪಿ ಜಿಲ್ಲೆಗೆ ವಿವಿಧ ಯೋಜನೆಯಡಿ ಗುರಿಯನ್ನು ನಿಗದಿಪಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಯೊಂದು ಯೋಜನೆಗೂ ಜಿಲ್ಲೆಯಿಂದ ಸಾವಿರಾರು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ನಿಗದಿಪಡಿಸಿದ ಗುರಿ ಕಳೆದ ಸಾಲಿಗಿಂತ ಶೇ.50ರಷ್ಟು ಕಡಿಮೆಯಾಗಿರುವುದರಿಂದ ಜಿಲ್ಲೆಯ ಅರ್ಜಿ ಸಲ್ಲಿಸಿದ ಬಹುತೇಕ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡಲೇ ತನ್ನ ಅಲ್ಪಸಂಖ್ಯಾತ ವಿರೋಧ ನೀತಿಯಿಂದ ಹೊರಬಂದು ನಿಗಮಕ್ಕೆ ಅವಶ್ಯವಿರುವ ಅನುದಾನವನ್ನು ಮಂಜೂರು ಮಾಡಬೇಕು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News