ಸೆ. 22: ಡಿವೈಎಫ್ಐ 12ನೇ ಮಂಗಳೂರು ನಗರ ಸಮ್ಮೇಳನ

Update: 2019-09-21 14:32 GMT

ಮಂಗಳೂರು: ಉದ್ಯೋಗ ಸೃಷ್ಟಿಸಿ, ನಿರುದ್ಯೋಗದಿಂದ ರಕ್ಷಿಸಿ, ಜೀವನ ಭದ್ರತೆಯ ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷ ವಾಕ್ಯದೊಂದಿಗೆ ಡಿವೈಎಫ್ಐ 12ನೇ ನಗರ ಸಮ್ಮೇಳನ ಸೆಪ್ಟೆಂಬರ್ 22 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಲಿದೆ.
ಬೆಳಿಗ್ಗೆ 9:30ಕ್ಕೆ ಡಿವೈಎಫ್ಐ ನಗರ ಅಧ್ಯಕ್ಷರಾದ ನವೀನ್ ಬೊಲ್ಪುಗುಡ್ಡೆ ಧ್ವಜಾರೋಹಣ ನಡೆಸಲಿದ್ದಾರೆ.

ನಂತರ ಡಿವೈಎಫ್ಐ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಉದ್ಘಾಟಿಸಲಿದ್ದಾರೆ. ಚಿಂತಕ ಮಹೇಂದ್ರ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ. ಡಿವೈಎಫ್ಐ ದ. ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಯುವತಿಯರ ಉಪ ಸಮಿತಿಯ ರಾಜ್ಯ ಸಹ ಸಂಚಾಲಕರು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಆಶಾ ಬೋಳೂರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ನಂತರ ನಡೆಯುವ ಯುವಜನ ಪ್ರತಿನಿಧಿ ಅಧಿವೇಶನದಲ್ಲಿ ಯುವಜನರು ಎದುರಿಸುತ್ತಿರುವ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಚರ್ಚೆ ನಡೆಸಲಿದೆ. ನಗರದ ಜನರು ಎದುರಿಸುತ್ತಿರುವ ವಿವಿಧ ಮೂಲಭೂತ ಸಮಸ್ಯೆಗಳ ಬಗ್ಗೆಯೂ ಸಮ್ಮೇಳನದಲ್ಲಿ ಚರ್ಚಿಸಿ ಮುಂದಿನ ದಿನಗಳಲ್ಲಿ ನಗರದಲ್ಲಿ ಯುವಜನರ ನಿರುದ್ಯೋಗ ಮತ್ತು ಜೀವನ ಭದ್ರತೆಯ ಉದ್ಯೋಗದ ವಿಷಯದಲ್ಲಿ ಹೋರಾಟ ಸಂಘಟಿಸುವ ಬಗ್ಗೆ ಮತ್ತು ನಗರದ ಅಭಿವೃದ್ಧಿಗೆ ಪೂರಕವಾಗಿ ಅನೇಕ ನಿರ್ಣಯಗಳನ್ನು ಸಮ್ಮೇಳನ ಹಮ್ಮಿಕೊಳ್ಳಲಿದೆ ಎಂದು ಡಿವೈಎಫ್ಐ ನಗರ ಕಾರ್ಯದರ್ಶಿ ಸಾದಿಕ್ ಕಣ್ಣೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News