ಅನುಭವ ಮಂಟಪ ನಿರ್ಮಾಣಕ್ಕೆ ಸರಕಾರದಿಂದ 50 ಕೋಟಿ ರೂ.ಅನುದಾನ

Update: 2019-09-21 14:56 GMT

ಬೆಂಗಳೂರು, ಸೆ.21: ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧೀಕಾರದಿಂದ ರಾಜ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅನುಭವ ಮಂಟಪಕ್ಕೆ 50 ಕೋಟಿ ರೂ. ಅನುದಾನಕ್ಕೆ ಮಂಜೂರು ದೊರೆತಿದ್ದು, ತಕ್ಷಣ 20 ಕೋಟಿ ರೂ.ಬಿಡುಗಡೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. 

12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಜಗತ್ತಿನ ಮೊದಲನೇ ಪಾರ್ಲಿಮೆಂಟ್ ‘ಅನುಭವ ಮಂಟಪ’ ಕುರಿತು ಶರಣರ ಜೀವನದ ಬಗ್ಗೆ ಹಾಗೂ ಅವರು ಸಾರಿದ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಮಾದರಿಯಲ್ಲಿ ಒಂದು ವಿನೂತನ ಅನುಭವ ಮಂಟಪ ನಿರ್ಮಾಣ ಮಾಡುವ ಸದುದ್ದೇಶದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News