ದ್ವಿದಳ ಧಾನ್ಯಗಳ ವರ್ಗದಡಿ ರಾಜ್ಯಕ್ಕೆ ಪ್ರಶಂಸಾ ಪ್ರಶಸ್ತಿ

Update: 2019-09-21 14:59 GMT

ಬೆಂಗಳೂರು, ಸೆ.21: ಭಾರತ ಸರಕಾರವು ಈ ವರ್ಷದ ದ್ವಿದಳ ಧಾನ್ಯಗಳ ವರ್ಗದಡಿ ಪ್ರಶಂಸಾ ಪ್ರಶಸ್ತಿಗೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿದೆ. ಕಳೆದ ಐದು ವರ್ಷಗಳಿಗಿಂತ ಹೆಚ್ಚಿನ ಉತ್ಪಾದನೆ ಸಾಧಿಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯು ಪ್ರಶಂಸಾ ಪತ್ರ ಹಾಗೂ ಒಂದು ಕೋಟಿ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ.

ಕೇಂದ್ರ ಸರಕಾರದ ಕೃಷಿ ಹಾಗೂ ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ರಾಜ್ಯಕ್ಕೆ ಪ್ರಶಸ್ತಿ ಲಭಿಸಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮಾಹಿತಿ ನೀಡಿ, ಮುಖ್ಯಮಂತ್ರಿಗಳನ್ನು ಹಾಗೂ ಕೃಷಿ ಇಲಾಖೆಯ ಎಲ್ಲ ಅಧಿಕಾರಿ ವರ್ಗದವರನ್ನು ಅಭಿನಂದಿಸಿದ್ದಾರೆ. ಪ್ರಶಸ್ತಿ ಸಂದಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಈ ಪ್ರಶಸ್ತಿಯು ರಾಜ್ಯದ ರೈತರು ಮತ್ತು ಕೃಷಿಗಾಗಿ ಶ್ರಮಿಸಿದ ಅಧಿಕಾರಿ ಹಾಗೂ ತಜ್ಞರಿಗೆ ದೊರಕಿದ ಮಾನ್ಯತೆ ಎಂದು ತಿಳಿಸಿದರು.

ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಿಗೆ ಕೇಂದ್ರ ಕೃಷಿ ಸಚಿವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News