ಕೇಂದ್ರದ ಆರ್ಥಿಕ ನೀತಿ ಕುರಿತು ಸಚಿವ ಸದಾನಂದ ಗೌಡಗೆ ಸಹಕಾರಿ ಯೂನಿಯನ್ ಮನವಿ

Update: 2019-09-21 16:02 GMT

ಉಡುಪಿ, ಸೆ.21: ಕೇಂದ್ರ ಸರಕಾರದ ಆರ್ಥಿಕ ನೀತಿಯಲ್ಲಿ ಆದಾಯ ತೆರಿಗೆ 80 ಪಿ(2) ಹಾಗೂ ಸೇವಾ ತೆರಿಗೆಗಳಿಂದ ಸಹಕಾರ ಸಂಘಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಸದಾನಂದ ಗೌಡ ಮೂಲಕ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಶನಿವಾರ ಉಡುಪಿಯಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಯೂನಿಯನ್ ನಿರ್ದೇಶಕರುಗಳಾದ ಎಚ್.ಗಂಗಾಧರ ಶೆಟ್ಟಿ, ಶ್ರೀಧರ್ ಪಿ.ಎಸ್, ಮನೋಜ್ ಕರ್ಕೇರ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ, ಜಿಲ್ಲಾ ಮುಖಂಡ ಉದಯಕುಮಾರ್ ಶೆಟ್ಟಿ, ಯೂನಿಯನ್ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಎಸ್.ಪಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News