ಬಿಡಿಎ ವಾಣಿಜ್ಯ ಸಂಕೀರ್ಣಗಳ ಟೆಂಡರ್ ತಡೆಗೆ ಸಿಎಂ ಆದೇಶ

Update: 2019-09-21 16:11 GMT

ಬೆಂಗಳೂರು, ಸೆ.21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಏಳು ಬಿಡಿಎ ವಾಣಿಜ್ಯ ಸಂಕೀರ್ಣಗಳ ಮರು ನಿರ್ಮಾಣಕ್ಕೆ ನೀಡಿದ್ದ ಟೆಂಡರ್ ಪ್ರಕ್ರಿಯೆ ತಡೆಹಿಡಿಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ ಇಂದಿರಾನಗರ, ಎಚ್‌ಎಸ್‌ಆರ್ ಬಡಾವಣೆ, ಆರ್.ಟಿ. ನಗರ, ಆಸ್ಟಿನ್‌ಟೌನ್, ಕೋರಮಂಗಲ, ವಿಜಯನಗರ ಮತ್ತು ಸದಾಶಿವನಗರ ಬಡಾವಣೆಗಳಲ್ಲಿರುವ ಏಳು ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಜಂಟಿ ಸಹಭಾಗಿತ್ವದಲ್ಲಿ ಶೇ.65:35ರ ಅನುಪಾತದಲ್ಲಿ ವಿಸ್ತರಿಸಬಹುದಾದ 30 ವರ್ಷಗಳ ಅಧಿಕ ಗುತ್ತಿಗೆ ಅವಧಿಯನ್ನು ನಮೋದಿಸಿ 60 ವರ್ಷಗಳ ಗುತ್ತಿಗೆ ನೀಡುವ ಸಂಬಂಧ ಟೆಂಡರ್ ಕರೆಯಲಾಗಿತ್ತು.

ಐದು ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಲು ಕೆಲವರು ಸಂಚು ರೂಪಿಸಿದ್ದಾರೆಂದು ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಎಸಿಬಿ, ಬಿಎಂಟಿಎಫ್, ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುತ್ತಿಗೆಗೆ ಸಂಬಂಧಿಸಿದಂತೆ ವಿವರವಾದ ಪರಿಶೀಲನೆಯ ಅಗತ್ಯವಿದೆ ಎಂದು ಟೆಂಡರ್ ಪ್ರಕ್ರಿಯೆ ತಡೆ ಹಿಡಿಯುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News