ಕೆ.ಆರ್.ಪೇಟೆ ಉಪಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್

Update: 2019-09-21 17:14 GMT

ಮಂಡ್ಯ, ಸೆ.21: ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅ.21 ರಂದು ನಡೆಯಲಿದ್ದು, ಜಿಲ್ಲಾಡಳಿತ ಸಕಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ. ಇಂದಿನಿಂದ ನೀತಿ ಸಂಹಿತೆ ಜಾರಿಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸೆ.23ರಿಂದ ನಾಮಪತ್ರ ಸ್ವೀಕಾರ ಮಾಡಲಾಗುತ್ತಿದ್ದು, ಸೆ.30 ನಾಮಪತ್ರಗಳ ಸಲ್ಲಿಕೆಗೆ ಕಡೆಯ ದಿನವಾಗಿದೆ. ಅ.3ನೇ ತಾರಿಖೀನವರೆಗೆ ನಾಮಪತ್ರ ಹಿಂಪಡೆಯುವುದಕ್ಕೆ ಅವಕಾಶವಿದೆ. ಅ.24 ಮತಗಳ ಎಣಿಕೆ ನಡೆಯಲಿದೆ ಎಂದರು.

ಈ ಕ್ಷೇತ್ರದಲ್ಲಿ 258 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 1,05,848 ಪುರುಷ ಹಾಗು 1,02,533 ಮಹಿಳಾ ಮತದಾರರಿದ್ದಾರೆ. 3 ಇತರೆ ಮತದಾರರು ಇದ್ದಾರೆ. ಸದರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಟಿ.ಯೊಗೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News