ಉಪ್ಪಿನಂಗಡಿ: ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ; ಓರ್ವನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ

Update: 2019-09-21 18:13 GMT

ಉಪ್ಪಿನಂಗಡಿ: ಧನ್ವಂತರಿ ಆಸ್ಪತ್ರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಕಾರಿ ಸಂದೇಶವನ್ನು ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಹಿರೇಬಂಡಾಡಿ ಗ್ರಾಮದ ನಿವಾಸಿ ಮುರ್ಶಿದ್ ಅಬ್ದುಲ್ಲಾ (21) ಪೊಲೀಸರಿಂದ ವಿಚಾರಣೆಗೊಳಗಾದವ. ಉಪ್ಪಿನಂಗಡಿಯ ಧನ್ವಂತರಿ ಆಸ್ಪತ್ರೆ ಹಾಗೂ ಅಲ್ಲಿನ ವೈದ್ಯರ ಬಗ್ಗೆ ಸುಳ್ಳು ಸುದ್ದಿಯನ್ನು ಸೃಷ್ಟಿಸಿಕೊಂಡು ಅವಹೇಳನಕಾರಿಯಾಗಿ ಬರೆದು ವಾಟ್ಸ್ ಆ್ಯಪ್ ಗಳಲ್ಲಿ ಸಂದೇಶ ಬಿತ್ತರಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯ ಡಾ. ನಿರಂಜನ್ ರೈ ಅವರು ಈ ಸಂದೇಶವನ್ನು ಹಂಚುತ್ತಿದ್ದ ಗ್ರೂಪ್‍ಗಳನ್ನು ಉಲ್ಲೇಖಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಉಪ್ಪಿನಂಗಡಿ ಪೊಲೀಸರು ಸೈಬರ್ ಕ್ರೈಂನ ನೆರವು ಪಡೆದುಕೊಂಡು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News