ಮಂಜೇಶ್ವರ: ಉಪಚುನಾವಣೆಗೆ ಸೆ.23ರಿಂದ ನಾಮಪತ್ರ ಸಲ್ಲಿಕೆ ಆರಂಭ

Update: 2019-09-22 05:47 GMT

ಮಂಜೇಶ್ವರ, ಸೆ.22: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯು ಸೋಮವಾರ(ಸೆ.23)ದಿಂದ ಆರಂಭಗೊಳ್ಳಲಿದೆ. ಪೂರ್ವಾಹ್ನ 11 ರಿಂದ ಅಪರಾಹ್ನ ಮೂರು ಗಂಟೆಯ ತನಕ ನಾಮಪತ್ರ ಸಲ್ಲಿಸಬಹುದು. ಚುನಾವಣಾಧಿಕಾರಿಯಾಗಿರುವ ಉಪ ಜಿಲ್ಲಾಧಿಕಾರಿ(ಎಲ್.ಆರ್.) ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.

ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಉಳಿದಿದ್ದು ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಹಾಗೂ ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News