ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

Update: 2019-09-22 12:19 GMT

ಪುತ್ತೂರು: ರೈಲ್ವೇ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರು ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಶನಿವಾರ ಪುತ್ತೂರು ತಾಲೂಕಿನ ಎಡಮಂಗಲ ಎಂಬಲ್ಲಿ ನಡೆದಿದೆ. 

ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಕೊಜಂಬೋಡಿ ನಿವಾಸಿ ಲಿಂಗಪ್ಪ ಗೌಡ(69) ಮೃತಪಟ್ಟ ವ್ಯಕ್ತಿ. ಮೃತರು ಪತ್ನಿ, ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ರೈಲ್ವೇ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News